ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ಫ್ಯಾನ್ಸ್ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ಸ್ ಮಾಡಿದ್ದಾರೆ. ರೇಣುಕಾಸ್ವಾಮಿ ಪರ ನಿಂತ ರಮ್ಯಾ ಬಗ್ಗೆ ದರ್ಶನ್ ಫ್ಯಾನ್ಸ್ ಅತೀ ಕೀಳುಮಟ್ಟದ ಕಮೆಂಟ್ ಮಾಡುವ ಮೂಲಕ ತಮ್ಮ ಸಿಟ್ಟನ್ನು ತೀರಿಸಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಫ್ಯಾನ್ಸ್ ವಿರುದ್ಧ ಸ್ಯಾಂಡಲ್‌ವುಡ್ ಕ್ವೀನ್, ನಟಿ ರಮ್ಯಾ ಗರಂ ಆಗಿದ್ದಾರೆ. ಕೊಲೆಯಾಗಿರುವ ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ನಿಂತಿರುವುದು ದರ್ಶನ್ ಫ್ಯಾನ್ಸ್ ಕೋಪಕ್ಕೆ ಕಾರಣವಾಗಿದೆ.
ಹಾಗಾಗಿ ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ ದರ್ಶನ್ ಅಭಿಮಾನಿಗಳು. ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ಕಳುಹಿಸುತ್ತಿರುವ ಅಶ್ಲೀಲ ಮೆಸೇಜ್‌ಗಳನ್ನು ತಮ್ಮದೇ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ಪೋಸ್ಟ್ ಕೂಡ ಮಾಡಿದ್ದಾರೆ ರಮ್ಯಾ. ಫೇಕ್ ಪ್ರೊಫೈಲ್ ಕ್ರಿಯೇಟ್ ಮಾಡಿ ಕಾಮೆಂಟ್ ಮಾಡಿದವರ ವಿರುದ್ಧ ದೂರು ಕೊಡಲು ನಟಿ ತಯಾರಿ ನಡೆಸುತ್ತಿದ್ದಾರೆ.
ಈ ನಡುವೆ ಪ್ರತಿಕ್ರಿಯಿಸಿರುವ ಗೃಹಸಚಿವ ಜಿ. ಪರಮೇಶ್ವರ್, ನಟಿ ದೂರು ಕೊಟ್ಟರೆ, ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲದೇ ನಮ್ಮಲ್ಲಿ ಕೆಲವು ಪ್ರಕರಣದಲ್ಲಿ ಸ್ವಯಂಪ್ರೇರಿತ ತಗೋತಾರೆ. ಆಥರ ಏನಾದ್ರೂ ಅವಕಾಶ ಇದ್ರೆ ಪೊಲೀಸರು ಪರಿಶೀಲನೆ ಮಾಡ್ತಾರೆ ಅಂತಲೂ ಹೇಳಿದ್ದಾರೆ.