ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೂ ಕೆಲವು ಕಿಡಿಗೇಡಿಗಳು ಅಶ್ಲೀಲ ಕಮೆಂಟ್ ಮಾಡಿರುವುದು ಮಹಿಳಾ ಆಯೋಗದ ಗಮನಕ್ಕೆ ಬಂದಿದೆ. ಅಸಭ್ಯ, ಅಶ್ಲೀಲ ಕಮೆಂಟ್ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ ಬರೆದಿತ್ತು. ಅದರ ಬೆನ್ನಲ್ಲೇ ಪೊಲೀಸರು ಎಫ್ಐಆರ್ (FIR) ದಾಖಲು ಮಾಡಿದ್ದಾರೆ.
ಅಸಭ್ಯ ಪದ ಬಳಸಿ ನಿಂದಿಸಿದ್ದ 4-5 ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ಕೇಸ್ ಹಾಕಿ ತನಿಖೆ ಆರಂಭಿಸಲಾಗಿದೆ.
ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ನಿಂದ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. BNS ಸೆಕ್ಷನ್ 75, 79, ಐಟಿ ಆ್ಯಕ್ಟ್ 67, 66ರ ಅಡಿ ಕೇಸ್ ದಾಖಲಿಸಿ ತನಿಖೆ ಮಾಡಲಾಗುತ್ತಿದೆ.