ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಶ್ಲೀಲ ವೀಡಿಯೋ ಹಂಚಿದ ಆರೋಪಕ್ಕೆ ದಾಖಲಾಗಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕೇವಲ ರಾಜ್ ಕುಂದ್ರಾಗೆ ಮಾತ್ರವಲ್ಲ, ನಟಿಯರಾದ ಶೆರ್ಲಿನಾ ಚೋಪ್ರಾ ಮತ್ತು ಪೂನಂ ಪಾಂಡೆಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇದರ ಜೊತೆಗೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಕೆ.ಎಂ. ಜೋಸೆಫ್ ಅವರಿದ್ದ ಪೀಠ ಆರೋಪಿಗಳು ತನಿಖೆಗೆ ಸಹಕರಿಸುವಂತೆ ಸೂಚಿಸಿದೆ.

ಅಶ್ಲೀಲ ವಿಡಿಯೋ ಹಂಚಿಕೆ ಕುರಿತಂತೆ ಭಾರತೀಯ ದಂಡ ಸಂಹಿತೆ, ಮಹಿಳೆಯರ ಅಸಭ್ಯ ಪ್ರಾತಿನಿಧ್ಯ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನದ ಕಾಯ್ದೆಯ ಅಡಿಯಲ್ಲಿ ಕುಂದ್ರಾ ಮತ್ತು ಇತರ ನಟಿಯರ ಮೇಲೆ ಎಫ್‍.ಐ.ಆರ್ ದಾಖಲಾಗಿತ್ತು. ಈ ಹಿಂದೆಯೇ ಕುಂದ್ರಾಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!