Saturday, July 2, 2022

Latest Posts

ಜಾಮೀನು ಪಡೆದ ಕೆಲವೇ ಗಂಟೆಗಳಲ್ಲಿ ಮತ್ತೆ ನಟ ದೀಪ್ ಸಿಧು ಅರೆಸ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೆಹಲಿ ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರ್ಕಿಯಲಾಜಿಕಲ್ ಸರ್ವೆ ಆಫ್ ಇಂಡಿಯಾ ದಾಖಲಿಸಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಟ ದೀಪ್ ಸಿಧು ಬಂಧನವಾಗಿದೆ. ಪ್ರತಿಭಟನೆ ವೇಳೆ ಪಾರಂಪರಿಕ ಕಟ್ಟಡದ ಕೆಲವು ಭಾಗಗಳು ಹಾನಿಗೊಳಗಾಗಿದೆ ಎಂದು ಎಎಸ್‌ಐ ಎಫ್‌ಐಆರ್‌ ದಾಖಲಿಸಿದೆ.
ಈ ಮುನ್ನ ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಟ್ರಾಕ್ಟರ್ ಮೆರವಣಿಗೆಯ ವೇಳೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 9 ರಂದು ಬಂಧಿಸಲ್ಪಟ್ಟಿದ್ದ ದೀಪ್ ಸಿಧುಗೆ ದೆಹಲಿಯ ಸ್ಥಳೀಯ ನ್ಯಾಯಾಲಯವು ಜಾಮೀನು ನೀಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss