ಯಾವುದೇ ಮುಲಜಿಲ್ಲದೆ ನಡೆಯಲಿದೆ ಒತ್ತುವರಿ ತೆರವು: ಸಚಿವ ಭೈರತಿ ಬಸವರಾಜ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯಾದ್ಯಂತ ಒತ್ತುವರಿಯಾಗಿರುವ ರಾಜಕಾಲುವೆ, ಕೆರೆ, ಸರ್ಕಾರಿ ಜಾಗಗಳ ಒತ್ತುವರಿಯನ್ನು ತೆರವು ಮಾಡಲಾಗುವುದು. ಬಡವ ಮತ್ತು ಶ್ರೀಮತ ಎಂಬ ತಾರತಮ್ಯಕ್ಕೆ ಒಳಗಾಗದೆ ಯಾವುದೇ ಮುಲಜಿಲ್ಲದೆ ಒತ್ತುವರಿ ತೆರವು ಕಾರ್ಯ ನಡೆಯಲಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದರು.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಬಂದಾಗ ತೀವ್ರ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ನಿವಾರಣೆ ಮಾಡುವ ಸಲುವಾಗಿ ರಾಜ್ಯಾದ್ಯಂತ ಒತ್ತುವರಿ ತೆರವು ಮಾಡಲಾಗುವುದು. ಇದರಲ್ಲಿ ಬಡವ ಮತ್ತು ಶ್ರೀಮಂತ ಎಂಬ ಯಾವುದೇ ತಾರತಮ್ಯಕ್ಕೆ ಒಳಗಾಗುವುದಿಲ್ಲ ಎಂದು ಹೇಳಿದರು.
ಈಗಾಗಲೇ 11 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರುನ್ನು ಖಾಯಂ ಗೊಳಿಸಲಾಗಿದೆ. ಹಂತ ಹಂತವಾಗಿ ಇನ್ನುಳಿದ ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲಾಗುವುದು. ಪೌರ ಕಾರ್ಮಿಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!