March 5, 2026
Thursday, March 5, 2026
spot_img

ಮಂತ್ರಾಲಯ ರಾಯರ ಮಠಕ್ಕೆ ಭಕ್ತ ಸಾಗರ: 22 ದಿನಗಳಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ 22 ದಿನಗಳಲ್ಲಿ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಡಿಸೆಂಬರ್ ಜನವರಿ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 3,53,54,465 ರೂ. ಕಾಣಿಕೆ ಸಂಗ್ರಹವಾಗಿದೆ.

ಸಂಗ್ರಹವಾದ ಕಾಣಿಕೆಯಲ್ಲಿ 3,42,70,305 ರೂ. ಕರೆನ್ಸಿ ನೋಟುಗಳು. 10,84,160 ರೂ. ನಾಣ್ಯಗಳು ಸಂಗ್ರಹವಾಗಿವೆ. 32 ಗ್ರಾಂ ಚಿನ್ನ, 1278 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !