Thursday, October 6, 2022

Latest Posts

ಅಕ್ಟೋಬರ್ 21ರಂದು ಕಾವೇರಿ ನದಿ ಉತ್ಸವ: ಸಿಎಂ ಬೊಮ್ಮಾಯಿ ಭಾಗವಹಿಸುವ ನಿರೀಕ್ಷೆ

ಹೊಸ ದಿಗಂತ ವರದಿ, ಕುಶಾಲನಗರ:

ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಾಗಿದ್ದ ಕಾವೇರಿ ನದಿ ಉತ್ಸವ ಕಾರಣಾಂತರಗಳಿಂದ ಅಕ್ಟೋಬರ್ 21 ಕ್ಕೆ‌ ಮುಂದೂಡಲ್ಪಟ್ಟಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ.
ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ವತಿಯಿಂದ ಶಾಸಕರಾದ ಎಂ.ಪಿ ಅಪ್ಪಚ್ಚು ರಂಜನ್ ಮತ್ತು ಕೆ.ಜಿ ಬೋಪಯ್ಯ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಂದರ್ಭ, ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುವ ನದಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ನಾಗೇಶ್, ನದಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ 2021ರ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಾಗಿದ್ದ ಕಾವೇರಿ ನದಿ ಉತ್ಸವ ಕಾರಣಾಂತರಗಳಿಂದ ಮುಂದೂಲ್ಪಟ್ಟಿತ್ತು. ಅಕ್ಟೋಬರ್ 21 ರಂದು ಕೊಡಗು ಜಿಲ್ಲೆಯ ತಲಕಾವೇರಿ, ಭಾಗಮಂಡಲ, ಕುಶಾಲನಗರ ವ್ಯಾಪ್ತಿಯಲ್ಲಿ ನದಿ ಉತ್ಸವ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಮುಖ್ಯಮಂತ್ರಿಗಳನ್ನು ಹಾಗೂ ಸಚಿವರನ್ನು ಭೇಟಿ ಮಾಡಿದ ಸಂದರ್ಭ ಮಾಹಿತಿ ನೀಡಲಾಯಿತು.
ಈ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದು, ನದಿ ಉತ್ಸವ ಕಾರ್ಯಕ್ರಮಕ್ಕೆ ಕೈಜೋಡಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರಾದ ಎಂ.ಎನ್ ಚಂದ್ರಮೋಹನ್, ರೀನಾ ಪ್ರಕಾಶ್, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎ.ಪೊನ್ನಪ್ಪ, ಮಣಿ ನಂಜಪ್ಪ, ಗಗನ್ ಗಣಪತಿ, ಪ್ರತೀಶ್ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!