January16, 2026
Friday, January 16, 2026
spot_img

ದಕ್ಷಿಣ ಆಫ್ರಿಕಾ ಎದುರು ಏಕದಿನ ಕದನ: ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಸಿದ್ಧ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 0-2ರ ಹೀನಾಯ ಸೋಲು ಕಂಡಿರುವ ಟೀಂ ಇಂಡಿಯಾ, ಇದೀಗ ಏಕದಿನ ಸರಣಿಯಲ್ಲಿ ಕಠಿಣ ಸವಾಲಿಗೆ ಸಜ್ಜಾಗಿದೆ. ಟೆಸ್ಟ್ ಸರಣಿಯ ಸೋಲಿಗೆ ಸೇಡು ತೀರಿಸಿಕೊಂಡು, ಒಂದು ದಿನದ ಪಂದ್ಯಗಳಲ್ಲಿ ತಮ್ಮ ಪ್ರಾಬಲ್ಯವನ್ನು ಸ್ಥಾಪಿಸುವ ಇರಾದೆಯನ್ನು ಭಾರತ ಹೊಂದಿದೆ.

ಆದರೆ, ಈ ಪ್ರಮುಖ ಸರಣಿಯ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಖಾಯಂ ನಾಯಕ ಶುಭ್​ಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ಇಬ್ಬರೂ ಗಾಯದ ಕಾರಣದಿಂದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆಯಿಂದಾಗಿ, ಹಿರಿಯ ಆಟಗಾರ ಕೆಎಲ್ ರಾಹುಲ್ ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗಿದೆ. ರಾಹುಲ್ ಅವರು ವಿಕೆಟ್ ಕೀಪರ್-ನಾಯಕರಾಗಿ ತಂಡಕ್ಕೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ.

ಇತ್ತ, ದಕ್ಷಿಣ ಆಫ್ರಿಕಾ ತಂಡವು ಟೆಂಬಾ ಬವುಮಾ ಅವರ ನಾಯಕತ್ವದಲ್ಲಿ ಭಾರತಕ್ಕೆ ಮತ್ತೊಂದು ಆಘಾತ ನೀಡಲು ಸಿದ್ಧವಾಗಿದೆ.

ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯವು ನಾಳೆ ರಾಂಚಿಯಲ್ಲಿರುವ JSCA ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

ಏಕದಿನ ಸರಣಿಗೆ ಭಾರತ ತಂಡ:

ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ರಿಷಭ್ ಪಂತ್ (ಉಪನಾಯಕ/ವಿಕೆಟ್ ಕೀಪರ್), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಧ್ರುವ ಜುರೆಲ್ ಮತ್ತು ಅರ್ಶ್ದೀಪ್ ಸಿಂಗ್.

ದಕ್ಷಿಣ ಆಫ್ರಿಕಾ ತಂಡ:

ಟೆಂಬಾ ಬವುಮಾ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಜ್‌ಕೆ, ಡೆವಾಲ್ಡ್ ಬ್ರೂಯಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್ಗಿಡಿ, ರಿಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಾಯೆನ್.

Must Read

error: Content is protected !!