ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್-2023 ಟೂರ್ನಿಯ ರಿಯಲ್ ಫೈಟ್ ಇಂದು ಆರಂಭವಾಗಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡ ವಿಶ್ವಕಪ್ ಫೈನಲ್ ಪ್ರವೇಶಿಸಲಿದೆ. ಈ ಪಂದ್ಯವನ್ನು ವೀಕ್ಷಿಸಲು ಅನೇಕ ಸೆಲೆಬ್ರಿಟಿಗಳು ಸಹ ಆಗಮಿಸುತ್ತಾರೆ. ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಪಂದ್ಯ ವೀಕ್ಷಿಸಲು ಮುಂಬೈಗೆ ತೆರಳಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೊರಗೆ ನೆರೆದಿದ್ದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಭಾರತ ಮತ್ತು ನ್ಯೂಜಿಲೆಂಡ್ ಸೆಮಿಫೈನಲ್ ಪಂದ್ಯವನ್ನು ವೀಕ್ಷಿಸಲಿದ್ದೇನೆ ಎಂದರು. ಈ ಸಂದರ್ಭದಲ್ಲಿ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಜೊತೆಗಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಏಕದಿನ ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ಮತ್ತು ಭಾರತ ತಂಡಗಳು ಒಂಬತ್ತು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಕಿವೀಸ್ ಐದು ಬಾರಿ ಮತ್ತು ಭಾರತ ತಂಡ ನಾಲ್ಕು ಬಾರಿ ಗೆದ್ದಿದೆ. ವಿಶ್ವಕಪ್ ಲೀಗ್ ಪಂದ್ಯದಲ್ಲಿ ಕಿವೀಸ್ ವಿರುದ್ಧ ಭಾರತ ತಂಡ ನಾಲ್ಕು ವಿಕೆಟ್ ಗಳಿಂದ ಗೆದ್ದಿರುವುದು ಗೊತ್ತೇ ಇದೆ. ಲೀಗ್ ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಸೆಮಿಸ್ ನಲ್ಲಿ ಕಿವೀಸ್ ತಂಡವನ್ನು ಅತ್ಯಂತ ಆತ್ಮವಿಶ್ವಾಸದಿಂದ ಎದುರಿಸಲಿದೆ.
https://twitter.com/i/status/1724529101145505841