ಹೊಸದಿಗಂತ ಡಿಜಿಟಲ್ ಡೆಸ್ಕ್:
ರೆಕಾರ್ಡ್ ಕಿಂಗ್ ವಿರಾಟ್ ಕೊಹ್ಲಿ, ಏಕದಿನ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ವೇಳೆ ಪಂದ್ಯಕ್ಕೂ ಮುನ್ನ ಯುವ ಅಭಿಮಾನಿಯೊಬ್ಬ ಮೈದಾನದಲ್ಲಿ ಕೊಹ್ಲಿ ಕಾಲಿಗೆ ನಮಸ್ಕರಿಸಿದ್ದಾನೆ. ಕೂಡಲೇ ಅಭಿಮಾನಿಯನ್ನು ತಡೆದು ಕೈಕುಲುಕಿ ಕಾಲಿಗೆ ನಮಸ್ಕರಿಸದಂತೆ ಕೊಹ್ಲಿ ಸಲಹೆ ನೀಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Goosebumps Moment for Every Viratian🥹❤️#viratkohli #HappyBirthdayViratKohli pic.twitter.com/ccTZSTVWg1
— 𝙒𝙧𝙤𝙜𝙣🥂 (@wrogn_edits) November 5, 2023
ಭಾನುವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ನವೆಂಬರ್ 12 ರಂದು ನೆದರ್ಲೆಂಡ್ಸ್ ವಿರುದ್ಧ ಲೀಗ್ ಹಂತದ ಕೊನೆಯ ಪಂದ್ಯ ನಡೆಯಲಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿ ಮುಂದುವರಿದರೆ, ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ನಾಲ್ಕನೇ ಸ್ಥಾನಕ್ಕಾಗಿ ನ್ಯೂಜಿಲೆಂಡ್, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಪೈಪೋಟಿ ನಡೆಸುತ್ತಿವೆ.