ಅಕ್ಟೋಬರ್ 5ರಿಂದ ಏಕದಿನ ವಿಶ್ವಕಪ್ ಕ್ರಿಕೆಟ್ ಆರಂಭ, ಅಹಮದಾಬಾದ್‌ನಲ್ಲಿ ಫೈನಲ್ಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

2023ರ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಆರಂಭವಾಗಲಿದ್ದು, ಫೈನಲ್ಸ್ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ ಎನ್ನಲಾಗಿದೆ.

ನವೆಂಬರ್ ಮಧ್ಯದವರೆಗೆ ಪಂದ್ಯಗಳು ನಡೆಯಲಿದ್ದು, ಅಂತಿಮ ಪಂದ್ಯಕ್ಕೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಇದಕ್ಕಾಗಿ ಹೆಚ್ಚು ಪ್ರೇಕ್ಷಕರು ಕುಳಿತುಕೊಳ್ಳಲು ಅವಕಾಶ ಇರುವ ಭಾರತದ ದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ಸ್ ನಡೆಸುವ ಚಿಂತನೆ ಮಾಡಲಾಗಿದೆ.

2011ರ ನಂತರ ಭಾರತದಲ್ಲಿ ವಿಶ್ವಕಪ್ ಇದೀಗ ಆಯೋಜನೆಯಾಗುತ್ತಿದೆ. ನವೆಂಬರ್ 19ಕ್ಕೆ ಫೈನಲ್ ಪಂದ್ಯ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!