ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಕದಿನ ವಿಶ್ವಕಪ್ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಝಿಂಬಾಬ್ವೆ ವಿರುದ್ಧ ಸ್ಕಾಟ್ಲ್ಯಾಂಡ್ ಗೆಲುವುಸಾಧಿಸಿದೆ. ಈ ಮೂಲಕ ಏಕದಿನ ವಿಶ್ವಕಪ್ ಆಸೆಯನ್ನು ಸ್ಕಾಟ್ಲ್ಯಾಂಟ್ ತಂಡವು ಜೀವಂತವಿರಿಸಿಕೊಂಡಿದೆ.
ನಿರ್ಣಾಯಕ ಪಂದ್ಯದಲ್ಲಿ ಸೋತಿರುವ ಝಿಂಬಾಬ್ವೆ ಇನ್ನು ಸ್ಕಾಟ್ಲ್ಯಾಂಡ್ ತಂಡದ ಮುಂದಿನ ಫಲಿತಾಂಶವನ್ನು ಕಾದು ನೋಡಬೇಕಿದೆ. ಒಂದು ವೇಳೆ ನೆದರ್ಲ್ಯಾಂಡ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಸ್ಕಾಟ್ಲ್ಯಾಂಡ್ ಗೆದ್ದರೆ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯಲಿದೆ.
ಟಾಸ್ ಗೆದ್ದ ಝಿಂಬಾಬ್ವೆ ತಂಡವು ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲ್ಯಾಂಡ್ ತಂಡ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 234 ರನ್ ಪೇರಿಸಿತು.
235 ರನ್ಗಳ ಗುರಿ ಪಡೆದ ಝಿಂಬಾಬ್ವೆ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ತಂಡವು 203 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಸ್ಕಾಟ್ಲ್ಯಾಂಡ್ ತಂಡವು 31 ರನ್ಗಳ ಜಯ ಸಾಧಿಸಿತು.