ಏಕದಿನ ವಿಶ್ವಕಪ್ ಟೂರ್ನಿ: ಟೀಂ ಇಂಡಿಯಾ 20 ಸಂಭಾವ್ಯ ಆಟಗಾರರ ಹೆಸರು ಫೈನಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಬಿಸಿಸಿಐ ಈಗಾಗಲೇ ಸಿದ್ದತೆ ಆರಂಭಿಸಿದ್ದು, ಟೂರ್ನಿಯಲ್ಲಿ ಪಾಲ್ಗೊಳ್ಳಿರುವ ಸಂಭಾವ್ಯ 20 ಆಟಗಾರರ ಹೆಸರನ್ನು ಫೈನಲ್‌ ಮಾಡಲಾಗಿದೆ.

2022 ರಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ಅಲ್ಲದೆ ಟಿ20 ವಿಶ್ವಕಪ್​ನಲ್ಲೂ ಟೀಂ ಇಂಡಿಯಾ ಚಾಂಪಿಯನ್ ಆಗಲಿಲ್ಲ. ಹೀಗಾಗಿ ಬಿಸಿಸಿಐ ಈ ಬರಿ ಬಲಿಷ್ಠ ತಂಡ ಕಟ್ಟಲು ನಿರ್ಧರಿಸಿದೆ.

ಈ ಪುನರಾವಲೋಕನ ಸಭೆಯಲ್ಲಿ ಟೀಂ ಇಂಡಿಯಾ ಹೆಡ್‌ ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ, ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ವಿವಿಎಸ್ ಲಕ್ಷ್ಮಣ್‌, ಮಾಜಿ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಹಾಗೂ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

2023ರಲ್ಲಿ ಭಾರತ ಕ್ರಿಕೆಟ್‌ ತಂಡವು 35 ಏಕದಿನ ಪಂದ್ಯಗಳನ್ನಾಡಲಿದೆ. ಇದು ಲಂಕಾ ವಿರುದ್ದ ತವರಿನಲ್ಲಿ 3 ಪಂದ್ಯಗಳ ಏಕದಿನ ಸರಣಿಯಿಂದಲೇ ಏಕದಿನ ವಿಶ್ವಕಪ್ ಟೂರ್ನಿಗೆ ತಯಾರಿ ಆರಂಭವಾಗಲಿದೆ. ಆಟಗಾರರ ವರ್ಕ್‌ಲೋಡ್‌ ಗಮನದಲ್ಲಿಟ್ಟುಕೊಂಡು, ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯು 10 ಐಪಿಎಲ್‌ ಫ್ರಾಂಚೈಸಿಗಳ ಜತೆ ಚರ್ಚಿಸಿ ಆಟಗಾರರಿಗೆ ವಿಶ್ರಾಂತಿ ನೀಡುವ ಬಗ್ಗೆ, ಫಿಟ್ನೆಸ್ ಕಾಪಾಡಿಕೊಳ್ಳುವುದರ ಕುರಿತಂತೆ ಸಮಾಲೋಚನೆ ನಡೆಸಲು ತೀರ್ಮಾನಿಸಲಾಗಿದೆ.

ಪುನರಾವಲೋಕನ ಸಭೆಯಲ್ಲಿ 2022ರಲ್ಲಿ ಟೀಂ ಇಂಡಿಯಾ ಏಷ್ಯಾಕಪ್ ಹಾಗೂ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವೈಫಲ್ಯ ಅನುಭವಿಸಿದ್ದರ ಬಗ್ಗೆಯೂ ಚರ್ಚೆಯನ್ನು ನಡೆಸಲಾಯಿತು ಎಂದು ವರದಿಯಾಗಿದೆ.

ರಾಷ್ಟ್ರೀಯ ತಂಡಕ್ಕೆ ನೇಮಕ ಮಾಡುವಾಗ, ದೇಶಿ ಕ್ರಿಕೆಟ್‌ ಟೂರ್ನಿಯಲ್ಲಿನ ಪ್ರದರ್ಶನವನ್ನು ಮಾನದಂಡವಾಗಿಟ್ಟುಕೊಂಡೇ, ರಾಷ್ಟ್ರೀಯ ತಂಡಕ್ಕೆ ಆಟಗಾರರನ್ನು ಆಯ್ಕೆ ಮಾಡಬೇಕು ಎಂದು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡುವ ಮುನ್ನ ಯೋ-ಯೋ ಟೆಸ್ಟ್‌ ಹಾಗೂ ಡೆಕ್ಸಾ ಕಡ್ಡಾಯಗೊಳಿಸಲಾಗಿದೆ. ಇದು ಯುವ ಹಾಗೂ ಎಲ್ಲಾ ಆಟಗಾರರಿಗೂ ಅನ್ವಯವಾಗಲಿದೆ.

2023ರ ಐಸಿಸಿ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು, ಆಟಗಾರರ ವರ್ಕ್‌ಲೋಡ್‌ ನಿರ್ವಹಣೆ ಮಾಡಲು ನ್ಯಾಷನಲ್ ಕ್ರಿಕೆಟ್‌ ಅಕಾಡೆಮಿಯು, 10 ಐಪಿಎಲ್ ಫ್ರಾಂಚೈಸಿಗಳ ಜತೆ ಸಂಪರ್ಕದಲ್ಲಿದ್ದು, ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಕುರಿತಂತೆ ಸಲಹೆ-ಸೂಚನೆ ನೀಡಲು ಅವಕಾಶ ಕಲ್ಪಿಸಲಾಗಿದೆ.

ಇದರೊಂದಿಗೆ 2023 ರಲ್ಲಿ ಭಾರತ ಆಡಲಿರುವ ಮುಂದಿನ 35 ಏಕದಿನ ಪಂದ್ಯಗಳಲ್ಲಿ ಈಗ ಆಯ್ಕೆಯಾಗಿರುವ 20 ಆಟಗಾರರನ್ನೇ ರೊಟೆಷನ್ ಪಾಲಿಸಿಯ ಮೂಲಕ ತಂಡದಲ್ಲಿ ಆಡಿಸಲಾಗುತ್ತದೆ.

ಆಟಗಾರರ ಫಿಟ್ನೆಸ್ ಅನ್ನು ಮೇಲ್ವಿಚಾರಣೆ ಮಾಡಲು ಐಪಿಎಲ್ ಫ್ರಾಂಚೈಸಿಗಳೊಂದಿಗೆ ಕೆಲಸ ಮಾಡುವಂತೆ ವಿವಿಎಸ್ ಲಕ್ಷ್ಮಣ್ ನೇತೃತ್ವದ ಎನ್​ಸಿಎಗೆ, ಬಿಸಿಸಿಐ ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!