ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಗಳೂರಿನ ಕಾಡುಬೀಸರಹಳ್ಳಿಯ ಅಪಾರ್ಮೆಂಟ್ ನಲ್ಲಿದ್ದಂತ ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಪತ್ನಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಭಿನವ್ ಸಿಂಗ್ ಅವರು ಒಡಿಶಾದಲ್ಲಿ ಖ್ಯಾತ ರ್ಯಾಪರ್ ಆಗಿ ಗುರ್ತಿಸಿಕೊಂಡಿದ್ದರು. ಬೆಂಗಳೂರಿನ ಕಾಡುಬೀಸರಹಳ್ಳಿಯಲ್ಲಿ ಅಪಾರ್ಮೆಂಟ್ ನಲ್ಲಿ ವಾಸವಿದ್ದರು.