ಒಡಿಶಾ ರೈಲು ಅಪಘಾತ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಒಡಿಶಾ ರೈಲು ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಈ ಕುರಿತು ಮಾಹಿತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಘೋಷಿದರು.

https://twitter.com/AshwiniVaishnaw/status/1664676130408878080?cxt=HHwWgMC-sd2Hj5ouAAAA

ಒಡಿಶಾದಲ್ಲಿ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಇದುವರೆಗೆ 179 ಜನರು ಗಾಯಗೊಂಡಿದ್ದಾರೆ ಮತ್ತು 50 ಜನರು ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!