ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಬಾಲಸೋರ್‌ನಲ್ಲಿ ನಡೆದ ತ್ರಿವಳಿ ರೈಲು ಅಪಘಾತದ ಕುರಿತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ತಜ್ಞರ ಸಮಿತಿಯಿಂದ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ರೈಲ್ವೇಯಲ್ಲಿ ಕವಚ್ ಪ್ರೊಟೆಕ್ಷನ್ ಸಿಸ್ಟಮ್ ಎಂಬ ಸ್ವಯಂಚಾಲಿತ ರೈಲು ಸಂರಕ್ಷಣಾ (ಎಟಿಪಿ) ವ್ಯವಸ್ಥೆಯ ಅನುಷ್ಠಾನಕ್ಕೆ ಮಾರ್ಗಸೂಚಿಗಳು ಮತ್ತು ನಿರ್ದೇಶನಗಳನ್ನು ನೀಡುವಂತೆ ಕೋರಿ ಪಿಐಎಲ್ ಸಲ್ಲಿಸಲಾಗಿದೆ.
ಲೊಕೊ ಪೈಲಟ್ ವಿಫಲವಾದಲ್ಲಿ ಸ್ವಯಂಚಾಲಿತವಾಗಿ ರೈಲು ನಿಯಂತ್ರಿಸುವ ಮೂಲಕ ರೈಲಿನ ವೇಗವನ್ನು ‘ಕವಚ’ ನಿಯಂತ್ರಿಸುತ್ತದೆ.
ರೈಲ್ವೆ ವ್ಯವಸ್ಥೆಯಲ್ಲಿ ಪ್ರಸ್ತುತ ಅಪಾಯ ಮತ್ತು ಸುರಕ್ಷತಾ ನಿಯತಾಂಕಗಳನ್ನು ವಿಶ್ಲೇಷಿಸಲು ಮತ್ತು ಅದರ ವರದಿಯನ್ನು ಸಲ್ಲಿಸಲು ತಾಂತ್ರಿಕ ಸದಸ್ಯರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತಜ್ಞರ ಆಯೋಗವನ್ನು ತಕ್ಷಣವೇ ಸ್ಥಾಪಿಸಲು ಕೋರಿ ವಕೀಲ ವಿಶಾಲ್ ತಿವಾರಿ ಸಲ್ಲಿಸಿದ ಪಿಐಎಲ್‌ನಲ್ಲಿ ವಿನಂತಿಸಲಾಗಿದೆ.