ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾ ತ್ರಿವಳಿ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ತಿಳಿಸಿದೆ.
‘ರೈಲ್ವೆ ಸಚಿವಾಲಯದ ಕೋರಿಕೆಯ ಮೇರೆಗೆ ಮತ್ತು ಒಡಿಶಾ ಸರ್ಕಾರದ ಒಪ್ಪಿಗೆಯೊಂದಿಗೆ ನಾವು ಪ್ರಕರಣವನ್ನು ದಾಖಲಿಸಿದ್ದೇವೆ. ಘಟನೆಯು ಒಡಿಶಾ ರಾಜ್ಯದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ನಲ್ಲಿ ಜೂನ್ 2ರಂದು ಕೋರಮಂಡಲ್ ಎಕ್ಸ್ಪ್ರೆಸ್, ಯಶವಂತಪುರ-ಹೌರಾ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಸಂಬಂಧಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದೆ’ ಎಂದು ಸಿಬಿಐ ಹೇಳಿದೆ.
ಒಡಿಶಾದ ಕಟಕ್ ಜಿಲ್ಲೆಯ ಬಾಲಸೋರ್ ಜಿಆರ್ಪಿಎಸ್ನಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಒಡಿಶಾದ ಬಾಲಸೋರ್ ರೈಲು ಅಪಘಾತದ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ರೈಲ್ವೆ ಮಂಡಳಿ ಭಾನುವಾರ ಶಿಫಾರಸು ಮಾಡಿದೆ.