ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಬಾಲಸೋರ್‌ನಲ್ಲಿ ಹಿಂದೆಂದೂ ಕಂಡಿರದಂಥ ಅಪಘಾತ ಸಂಭವಿಸಿದ್ದು, 233 ಮಂದಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದು, ಮಾಹಿತಿ ಪಡೆದಿದ್ದಾರೆ. ರೈಲ್ವೆ ದುರಂತ ಭೀಕರವಾಗಿದೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಳುಗಳಿಗೂ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮೃತರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆಯಾಗಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತನಿಖೆಗಾಗಿ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆ ಮೊದಲ ಆದ್ಯತೆ ನೀಡಲಾಗುವುದು. ರೈಲು ಸುರಕ್ಷತಾ ಆಯುಕ್ತರಿಂದ ಸ್ವತಂತ್ರ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.