ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 1175 ರೋಗಿಗಳನ್ನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅದರಲ್ಲಿ 793 ರೋಗಿಗಳನ್ನ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಒಡಿಶಾ ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು 382 ರೋಗಿಗಳು ಆಸ್ಪತ್ರೆಯಲ್ಲಿದ್ರೆ, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಉಳಿದವರೆಲ್ಲರೂ ಸ್ಥಿರವಾಗಿದ್ದಾರೆ ಎಂದು ತಿಳಿಸಿದೆ.
ಈ ನಡುವೆ ರಕ್ಷಣಾ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ ಮತ್ತು ಕೊನೆಯ ಬೋಗಿಗೆ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಹೇಳಿದ್ದಾರೆ.
ಇನ್ನು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿರುವ ಜನರು ಚಿಕಿತ್ಸೆಯ ನಂತ್ರ ಆಸ್ಪತ್ರೆಯಿಂದ ತಮ್ಮ ಸ್ಥಳಗಳಿಗೆ ತೆರಳಿದ್ದಾರೆ. ಇನ್ನು ಏಮ್ಸ್ ಭುವನೇಶ್ವರ್ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ 160 ಶವಗಳನ್ನ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.