ಎಐಎಫ್ಎಫ್​ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಶಾಜಿ ಪ್ರಭಾಕರನ್ ನೇಮಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್)ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಶಾಜಿ ಪ್ರಭಾಕರನ್ ಶನಿವಾರ ನೇಮಕಗೊಂಡಿದ್ದಾರೆ. ಎಐಎಫ್‌ಎಫ್‌ನ ಹೊಸದಾಗಿ ರಚಿಸಲಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಪ್ರಭಾಕರನ್ ಅವರನ್ನು ಆಯ್ಕೆ ಮಾಡಲಾಗಿದೆ.
ಎಐಎಫ್ಎಫ್​ನ ಚುಕ್ಕಾಣಿ ಹಿಡಿದಿರುವ ಅಧ್ಯಕ್ಷ ಕಲ್ಯಾಣ್ ಚೌಬೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಐಎಫ್‌ಎಫ್‌ನ ನೂತನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಪ್ರಭಾಕರನ್ ಹೆಸರನ್ನು ಕಲ್ಯಾಣ್ ಚೌಬೆ ಪ್ರಸ್ತಾಪಿಸಿದರು. ಇದನ್ನು ಎಲ್ಲ ಸದಸ್ಯರು ಸರ್ವಾನುಮತದಿಂದ ಅನುಮೋದಿಸಿದರು ಎಂದು ಎಐಎಫ್‌ಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!