ಲ್ಯಾಂಡಿಂಗ್ ವೇಳೆ ವಿಮಾನದ ಟೈಯರ್ ಸ್ಫೋಟ: ತಪ್ಪಿದ ಭಾರೀ ದೊಡ್ಡ ಅನಾಹುತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನದ ಹಿಂಬದಿಯ ಟೈಯರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ರಾತ್ರಿ 11:30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬ್ಯಾಂಕಾಕ್​ನಿಂದ ಟೆಕ್ ಆಫ್ ಆಗಿದ್ದ ಥಾಯ್ ಏರ್ ವೇಸ್‌ ಸಂಸ್ಥೆಯ ವಿಮಾನ ಕೆಐಎಎಲ್​ನಲ್ಲಿ ಲ್ಯಾಂಡಿಂಗ್​ ಆಗುವ ವೇಳೆ ಹಿಂಭಾಗದ ಟೈಯರ್ ಸ್ಫೋಟಗೊಂಡಿದೆ. ವಿಮಾನ ನಿಲ್ದಾಣದ ಸಿಬ್ಬಂದಿ ಪೈಲೆಟ್​ಗೆ ತಕ್ಷಣ ಎಚ್ಚರಿಕೆ ನೀಡಿದ್ದಾರೆ. ಈ ಮಾಹಿತಿ ಅರಿತ ಪೈಲೆಟ್‌ ಜಾಗರೂಕತೆಯಿಂದ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ.
ವಿಮಾನ ಲ್ಯಾಂಡಿಂಗ್​ ಆದ ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದ್ದು, ತಾಂತ್ರಿಕ ಸಿಬ್ಬಂದಿ ತಪಾಸಣೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!