Tuesday, August 16, 2022

Latest Posts

ಶಿಕ್ಷಣದ ಮೂಲಕ ಸಮಾಜದ ಎಲ್ಲಾ ಸಮಸ್ಯೆಗಳು ಬಗೆಹರಿಸಲು ಸಾಧ್ಯ: ಸಚಿವ ಡಾ.ಅಶ್ವಥ್ ನಾರಾಯಣ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಮೈಸೂರು:

ಶಿಕ್ಷಣದ ಮೂಲಕ ಸಮಾಜದ ಎಲ್ಲಾ ಸಮಸ್ಯೆಗಳನ್ನ ಬಗೆಹರಿಸಲು ಸಾಧ್ಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದರು.
ಮಂಗಳವಾರ ಮೈಸೂರಿನ ಮಹಾರಾಣಿ ಕಲಾ ಮತ್ತು ವಿಜ್ಞಾನ ಕಾಲೇಜ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತಂತೆ ವಿದ್ಯಾರ್ಥಿ, ಪೋಷಕರು ಹಾಗೂ ಕಾಲೇಜ್ ಸಿಬ್ಬಂದಿಗಳೊoದಿಗೆ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಣ ನಮ್ಮ ಬದುಕಿಗೆ ರಾಜಮಾರ್ಗ. ಶಿಕ್ಷಣದ ಮೂಲಕವಾಗಿ ಎಲ್ಲಾ ಅರ್ಥಿಕ ವ್ಯವಸ್ಥೆ ಬೆಳವಣಿಗೆ ಆಗುತ್ತಿದೆ.ಶಿಕ್ಷಣ ಈ ಮನುಷ್ಯ ಹುಟ್ಟುದಾಗಿನಿಂದಲೂ ಇದೆ. ಆದರೆ ಶಿಕ್ಷಣ ನೀಡುವ ನೀತಿಗಳು ಬದಲಾವಣೆ ಮಾಡಿ ಗುಣಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಂದುವರೆದ ರಾಷ್ಟ್ರಗಳ ಜೊತೆ ನಮಗೆ ಸ್ಪರ್ಧೆ ಇದೆ. ಸಂಶೋಧನಾ ಕೇಂದ್ರ ಆಗಬೇಕು ಎಂಬ ಬೇಡಿಕೆಗಳು ಕೇಳಿ ಬಂದಿವೆ.ಇAತಹ ಕೆಲಸಗಳನ್ನು ಮಾಡದೇ ಇದ್ದರೆ ಶೈಕ್ಷಣಿಕವಾಗಿ ಮುಂದುವರೆಯುವುದು ಹೇಗೆ ಒಂದಷ್ಟು ಬದಲಾವಣೆ ತಂದು ಉತ್ತಮ ಶಿಕ್ಷಣ ನೀಡಬೇಕು. ನಾವು ಅಭಿವೃದ್ಧಿ ಕಾಣಬೇಕು ಅಂದರೆ ಶಿಕ್ಷಣದಲ್ಲಿ ಸುಧಾರಣೆ ಕಾಣಬೇಕು. ಇವತ್ತು ಸ್ಪರ್ಧಾತ್ಮಕ ಯುಗದಲ್ಲಿ ಇದ್ದೇವೆ. ವಿಶ್ವಮಟ್ಟದಲ್ಲಿ ನಾವು ಓಡಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಎಲ್ಲಾ ಕಾರ್ಯಕ್ರಮ ರೂಪಿಸುತ್ತಿದೆ ಎಂದು ತಿಳಿಸಿದರು.
ರಾಷ್ಟಿçÃಯ ಶಿಕ್ಷಣ ನೀತಿ ಅನುಷ್ಠಾನ ಕಾರ್ಯಾಗಾರವನ್ನು ಸರ್ಕಾರಿ ಕಾಲೇಜುಗಳಲ್ಲಿ ಮಾಡಲಾಗುತ್ತಿದೆ. ಮಹಾರಾಣಿ ಕಾಲೇಜಿನಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಿರುವುದು ಸಂತೋಷದ ವಿಚಾರ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss