Thursday, August 11, 2022

Latest Posts

ಚಿತ್ತಾಪುರದ ವಾಡಿ ಪುರಸಭೆ ವಾರ್ಡ್ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕಲಬುರಗಿ:

ಕೆಪಿಸಿಸಿ ವಕ್ತಾರ ಶಾಸಕ ಪ್ರಿಯಾಂಕ್ ಖರ್ಗೆ ಮತಕ್ಷೇತ್ರ ಚಿತ್ತಾಪುರದ ವಾಡಿ ಪುರಸಭೆ ವಾರ್ಡ್ ಉಪಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ವಾಡಿ ಪುರಸಭೆ ವಾರ್ಡ್ ನಂ.23 ಹಾಗೂ 4ರ ಉಪಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ವಿಜಯ ಪತಾಕೆ ಹಾರಿಸಿದ್ದಾರೆ.
ಪುರಸಭೆ ಸದಸ್ಯರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸೆಪ್ಟೆಂಬರ್ 3ರಂದು ಚುನಾವಣೆ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ವಾರ್ಡ್ ನಂ.4ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಚಂದು 373 ಮತ ಗಳಿಸಿದರೆ, ಎದುರಾಳಿ ಬಿಜೆಪಿ ಅಭ್ಯರ್ಥಿ ರವಿನಾಯಕ್ ಮಾನಸಿಂಗ್ 560 ಮತಗಳನ್ನು ಪಡೆದುಕೊಂಡು 187 ಮತಗಳಿಂದ ಜಯಭೇರಿ ಬಾರಿಸಿದ್ದಾರೆ.
ವಾರ್ಡ್ ನಂ.23ರಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರಶುರಾಮ ಕಟ್ಟಿಮನಿ 397 ಮತಗಳನ್ನ ಪಡೆದರೆ, ಬಿಜೆಪಿ ಅಭ್ಯರ್ಥಿ ಅಮರೇಶ್ ಕುರಾಕುಂಟಾ 521 ಮತಗಳು ಪಡೆದು 124 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ವಾಡಿ ಪುರಸಭೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss