ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….
ಹೊಸ ದಿಗಂತ ವರದಿ, ವಿಜಯಪುರ:
ರಾಜ್ಯದ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತ ತಿರುಗುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಮತಿಭ್ರಮಣೆ ಉಂಟಾಗಿದೆ ಎಂದು ಬಿಜೆಪಿ ಜಿಲ್ಲಾ ಕೋಶಾಧ್ಯಕ್ಷ ಭೀಮಾಶಂಕರ ಹದನೂರ ಟೀಕಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾಮೀಜಿಗಳು ಅಶ್ಲೀಲ ಸಿಡಿ ನೋಡಿದ್ದಾರೆಂದು ಆರೋಪಿಸುವುದು ಯತ್ನಾಳರ ವಿಕೃತ ಮನಸ್ಸಿಗೆ ಹಿಡಿದ ಕನ್ನಡಿಯಾಗಿದೆ. ಸದ್ಯ ಮಹಾನಗರ ಪಾಲಿಕೆ ಸದಸ್ಯರು ಇಲ್ಲ, ನಗರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಮೊದಲು ಅವುಗಳನ್ನು ಬಗೆಹರಿಸಲಿ. ಅದನ್ನು ಬಿಟ್ಟು ಕೇವಲ ಭ್ರಷ್ಟಾಚಾರ ಆರೋಪ ಮಾಡಿಕೊಂಡು ತಿರುಗುತ್ತಿರುವುದು ಸರಿಯಲ್ಲ ಎಂದರು.
ಶಾಸಕ ಯತ್ನಾಳರ ಕ್ಷೇತ್ರದಲ್ಲಿಯೇ ಭ್ರಷ್ಟಾಚಾರದ ಅರೋಪಗಳು ಕೇಳಿ ಬರುತ್ತಿವೆ. ಈ ಹಿಂದೆ ಪಂಚಮಸಾಲಿ ಸಮಾಜದ ಮುಖಂಡರ 2ಎ ಹೋರಾಟ ನಡೆಸಿದ್ದ ಸಂದರ್ಭ ಯಾವುದೇ ಹೇಳಿಕೆ ನೀಡದ ಇವರು, ಸದ್ಯ ಅಧಿಕಾರಕ್ಕಾಗಿ ಸಮಾಜದ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಯತ್ನಾಳರು ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಜನರು, ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.