ಗುಜರಾತ್‌ನ ಏಕತಾ ಪ್ರತಿಮೆಯ ಬಳಿಯಲ್ಲೇ ನಡುಗಿದ ಭೂಮಿ…

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಕತಾ ಪ್ರತಿಮೆಯಿರುವ ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ ಭೂಮ ಕಂಪಿಸಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ, ನಷ್ಟ ಸಂಭವಿಸಿಲ್ಲ.
ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.1 ದಾಖಲಾಗಿದ್ದು, ಕಂಪನದ ಕೇಂದ್ರಬಿಂದು ಕೆವಾಡಿಯಾದಿಂದ ಪೂರ್ವ ಆಗ್ನೇಯಕ್ಕೆ 12 ಕಿಮೀ ದೂರದಲ್ಲಿದೆ ಎಂದು ಭೂಕಂಪನ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ಕೆವಾಡಿಯಾ ಗ್ರಾಮದ ಬಳಿಯಲ್ಲಿಯೇ 182 ಮೀಟರ್ ಎತ್ತರದ ಏಕತಾ ಪ್ರತಿಮೆಯಿದೆ. ಪ್ರಬಲ ಭೂಕಂಪನ, ಚಂಡಮಾರುತಗಳನ್ನು ತಡೆದುಕೊಳ್ಳುವ ರೀತಿಯಲ್ಲಿ ಈ ಪ್ರತಿಮೆಯನ್ನು ನಿರ್ಮಿಸಲಾಗಿರು ಹಿನ್ನೆಲೆಯಲ್ಲಿ ಯಾವುದೇ ಹಾನಿಯಾಗಿಲ್ಲ ಎಂದು ಸ್ಮಾರಕದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಹುಲ್ ಪಟೇಲ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!