ಪ್ರೇಮಿಗಳ ದಿನದಂದು ಗೋಲ್ಡನ್ ಸ್ಟಾರ್ ನಟನೆಯ ‘ಬಾನ ದಾರಿಯಲಿ’ ಚಿತ್ರದ ಟೀಸರ್ ಬಿಡುಗಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ತ್ರಿಬಲ್ ರೈಡಿಂಗ್ ಸಿನಿಮಾ ಕಳೆದ ವರ್ಷವೇ ಬಿಡುಗಡೆಯಾಯಿತಾದರೂ ಈ ಚಿತ್ರ ನಿರೀಕ್ಷಿಸಿದ ಯಶಸ್ಸು ಗಳಿಸಲಿಲ್ಲ. ಗಣೇಶ್ ಸದ್ಯ ನಿರ್ದೇಶಕ ಪ್ರೀತಮ್ ಗುಬ್ಬಿ ಜತೆ ಕೈ ಜೋಡಿಸಿದ್ದು ‘ಬಾನ ದಾರಿಯಲಿ’ ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರದ ಚಿತ್ರೀಕರಣ ಮುಗಿದಿದ್ದು, ಮಾರ್ಚ್ 17ರಂದು ಸಿನಿಮಾವನ್ನು ತೆರೆಗೆ ತರುವುದಾಗಿ ಘೋಷಿಸಿದೆ ಚಿತ್ರತಂಡ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಹ ಬಿಡುಗಡೆಯಾಗಿದೆ. ಅಲ್ಲದೆ ಫೆ. 14ರಂದು ಆಚರಿಸಲ್ಪಡುವ ಪ್ರೇಮಿಗಳ ದಿನಾಚರಣೆ ಪ್ರಯುಕ್ತ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.

ಗಣೇಶ್ ಹಾಗೂ ಚಿತ್ರತಂಡ ಈ ಕುರಿತು ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ. ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ ಹಾಗೂ 96 ಚಿತ್ರಗಳಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಆಕ್ಷನ್ ಕಟ್ ಹೇಳಿದ್ದ ಪ್ರೀತಮ್ ಗುಬ್ಬಿ ಈ ಬಾರಿ ಬಾನ ದಾರಿಯಲಿ ಚಿತ್ರದ ಮೂಲಕ ಯಾವ ರೀತಿ ನಿರ್ದೇಶನ ಮಾಡಿರಲಿದ್ದಾರೆ ಎಂಬ ಕುತೂಹಲ ಸಿನಿ ರಸಿಕರಲ್ಲಿದೆ.

ಈ ಚಿತ್ರದಲ್ಲಿ ಇಬ್ಬರು ನಟಿಯರಿದ್ದು, ರೀಷ್ಮಾ ನಾನಯ್ಯ ಹಾಗೂ ರುಕ್ಮಣಿ ವಸಂತ್ ನಟಿಸಿದ್ದಾರೆ. ಚಿತ್ರದಲ್ಲಿ ರಂಗಾಯಣ ರ‍ಘು, ಅಶೋಕ್ ಮುಂತಾದವು ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತವಿದ್ದು, ಇಲ್ಲಿಯವರೆಗೂ ಬಿಡುಗಡೆಯಾಗಿರುವ ಹಾಡುಗಳ ಮೂಲಕ ಹೇಳಿಕೊಳ್ಳುವಂತಹ ಮೋಡಿ ಮಾಡದೇ ಇದ್ದು, ಮುಂದಿನ ಹಾಡುಗಳಲ್ಲಿ ಕೇಳುಗರ ಮನ ಗೆಲ್ಲುವಂತಹ ಸಂಗೀತ ನೀಡಲಿದ್ದಾರಾ ಎಂಬುದನ್ನು ಕಾದುನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!