Wednesday, September 28, 2022

Latest Posts

ಮಿನಿ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕರಿಬ್ಬರಿಗೆ ಗಂಭೀರ ಗಾಯ

ಹೊಸ ದಿಗಂತ ವರದಿ, ಕುಮಟಾ:

ಮಿನಿ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನದ ಚಾಲಕರು ಗಂಭೀರ ಗಾಯಗೊಂಡ ಘಟನೆ ಪಟ್ಟಣದ ಮಾನೀರು ದುರ್ಗಾದೇವಿ ದೇವಸ್ಥಾನದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಬಾಗಲಕೋಟ ಜಿಲ್ಲಾ ನಿವಾಸಿ ಅಜಯ ರಾಥೋಡ ಹಾಗೂ ಕುಮಟಾ ತಾಲೂಕಿನ ಕಲಭಾಗ ನಿವಾಸಿ ಆನಂದು ಭಂಡಾರಿ ಗಾಯಗೊಂಡ ಚಾಲಕರಾಗಿದ್ದಾರೆ. ಇನ್ನಿಬ್ಬರರಿಗೆ ಸಣ್ಣ ಗಾಯಗಳಾಗಿದ್ದು, ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಗಾಯಗೊಂಡ ಚಾಲಕರನ್ನು ಸ್ಥಳೀಯರ ಸಹಕಾರದಲ್ಲಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳ ಮುಂಬಾಗ ಸಂಪೂರ್ಣ ಜಖಂಗೊಂಡಿದೆ.
ಹೆದ್ದಾರಿಯಲ್ಲಿ ನಡೆದ ಈ ಅಪಘಾತದಿಂದ ಗಂಟೆಗಳ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿರುವುದರಿಂದ ದೂರದ ಊರಿಗೆ ತೆರಳುವ ಪ್ರಯಾಣಿಕರು ಪರದಾಡುವಂತಾಯಿತು. ಸ್ಥಳಕ್ಕೆ ಭೇಟಿ ನೀಡಿದ ಪಿ.ಎಸ್.ಐ ರವಿ ಗುಡ್ಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳೀಯರ ಹಾಗೂ ವಾಸು ಉಪ್ಪಾರ ಅವರ ಕ್ರೇನ್ ಮೂಲಕ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!