ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 319 ಕೋ.ರೂ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಹೊಸ ದಿಗಂತ ವರದಿ, ಮೈಸೂರು:

ಅರಮನೆ ನಗರಿ ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಮಂಡಕಳ್ಳಿಯಲ್ಲಿರುವ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ 319 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ವಿಮಾನ ನಿಲ್ದಾಣದ ಉನ್ನತೀಕರಣ ಮತ್ತು ರನ್ ವೇ ವಿಸ್ತರಣೆಗಾಗಿ 240 ಎಕರೆ ಭೂಮಿ ಅಗತ್ಯವಿದ್ದು, ಇದನ್ನು ರಾಜ್ಯ ಸರ್ಕಾರ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ಹಸ್ತಾಂತರ ಮಾಡಲಿದೆ. ಇದರ ಜೊತೆಗೆ ಮುಂದಿನ 25 ವರ್ಷಗಳನ್ನು ಗುರಿಯಾಗಿಟ್ಟುಕೊಂಡು ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು, ಮೂಲ ಸೌಲಭ್ಯಗಳನ್ನು ಒದಗಿಸುವುದು, ಗ್ರಾಹಕರಿಗೆ ಅಗತ್ಯ ಸೇವೆ ಒದಗಿಸುವುದು ಪ್ರಾಧಿಕಾರದ ಕರ್ತವ್ಯವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಸಂಬAಧ ಈಗಾಗಲೇ ಭೂಮಿ ಖರೀದಿ ಪ್ರಕ್ರಿಯೆ ಆರಂಭವಾಗಿದ್ದು, ಹಣ ಬಿಡುಗಡೆಯಿಂದ ಕಾಮಗಾರಿಗೆ ವೇಗ ಸಿಗಲಿದೆ . ರನ್ ವೇ ವಿಸ್ತರಣೆಯಿಂದ ಮತ್ತಷ್ಟು ವಿಮಾನಗಳು ದೇಶದ ವಿವಿಧೆಡೆ ಹಾರಾಟ ನಡೆಸಲು ಸಾಧ್ಯವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!