ಪಂಜಾಬ್ ನ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಉಸಿರಾಟದ ತೊಂದರೆಯಿಂದ ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಂಜಾಬ್ ನ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್  ನಿಧನರಾದರು. ಅವರಿಗೆ 95 ವಯಸ್ಸಾಗಿತ್ತು. ಅವರು ಐದು ಅವಧಿಗೆ ಪಂಜಾಬ್ ನ ಮುಖ್ಯಮಂತ್ರಿಯಾಗಿದ್ದರು.

ಬುಧವಾರ ಬೆಳಿಗ್ಗೆ ಅವರ ಪಾರ್ಥಿವ ಶರೀರವನ್ನು ಮೊಹಾಲಿಯಿಂದ ಬಾದಲ್ ಗ್ರಾಮಕ್ಕೆ ಸ್ಥಳಾಂತರಿಸಲಾಗುವುದು. ಬಳಿಕ ಭಟಿಂಡದ ಬಾದಲ್ ಗ್ರಾಮದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!