ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………..
ಹೊಸ ದಿಗಂತ ವರದಿ, ಗದಗ:
ಇತ್ತೀಚಿಗೆ ಮೈಸೂರಿನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳಿಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಅವರು ಅಭಿನಂದಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಈ ಘಟನೆಯು ತೀವ್ರ ಖಂಡನೀಯ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವುದು ದೊಡ್ಡ ಸವಾಲಾಗಿತ್ತು. ಆದರೆ, ಆರೋಪಿಗಳು ಹೊರ ರಾಜ್ಯಗಳಿಗೆ ಪಲಾಯನ ಮಾಡಿದ್ದರೂ ಸಹ ಆದ್ಯತೆ ಮೇರೆಗೆ ತನಿಖೆ ಕೈಗೊಂಡು, ಸಾಕಷ್ಟು ಸಾಕ್ಷಾಧಾರಗಳನ್ನು, ಮಾಹಿತಿಗಳನ್ನು ಸಂಗ್ರಹಿಸಿ ಅಂತಿಮವಾಗಿ ಆರೋಪಿಗಳನ್ನು ಬಂಧಿಸುವ ಮೂಲಕ ನಮ್ಮ ರಾಜ್ಯದ ಪೊಲೀಸರು ಮತ್ತೊಮ್ಮೆ ತಮ್ಮ ದಕ್ಷತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಸಮಾಜಬಾಹಿರ ಕೃತ್ಯಗಳನ್ನು ನಡೆಸುವವರಿಗೆ ಉಳಿಗಾಲವಿಲ್ಲ ಎಂಬ ಎಚ್ಚರಿಕೆಯ ಕಠಿಣ ಸಂದೇಶವನ್ನು ನೀಡಿದ್ದಾರೆ ಎಂದು ಸಿ.ಸಿ. ಪಾಟೀಲ ಅವರು ತಿಳಿಸಿದ್ದಾರೆ.