ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತ್ರಿ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತ್ರಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
”ದುರದೃಷ್ಟಕರ ರಸ್ತೆ ಅಪಘಾತದಲ್ಲಿ ಸೈರಸ್ ಮಿಸ್ತ್ರಿಯವರ ಅಕಾಲಿಕ ನಿಧನದಿಂದ ತೀವ್ರ ದುಃಖವಾಗಿದೆ. ಪ್ರತಿಷ್ಠಿತ ಉದ್ಯಮಿ, ಆರ್ಥಿಕತೆಯ ಬೆಳವಣಿಗೆಯಲ್ಲಿ ಅವರ ಕೊಡುಗೆ ಅಪಾರವಾಗಿದೆ. ದೇವರು ಅವರ ಕುಟುಂಬ ಮತ್ತು ಸ್ನೇಹಿತರಿಗೆ ಈ ದೊಡ್ಡ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ”ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!