Sunday, October 2, 2022

Latest Posts

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತ್ರಿ ನಿಧನ: ಪ್ರಧಾನಿ ಮೋದಿ ತೀವ್ರ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತ್ರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಸೈರಸ್ ಮಿಸ್ತ್ರಿ ಅವರ ಅಕಾಲಿಕ ನಿಧನ ಆಘಾತಕಾರಿಯಾಗಿದೆ. ಅವರು ಭಾರತದ ಆರ್ಥಿಕ ಬಲದಲ್ಲಿ ನಂಬಿಕೆಯಿಟ್ಟ ಭರವಸೆಯ ಉದ್ಯಮಿಯಾಗಿದ್ದರು. ಅವರ ನಿಧನವು ವಾಣಿಜ್ಯ ಮತ್ತು ಕೈಗಾರಿಕಾ ಜಗತ್ತಿಗೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!