ಹೊಸ ದಿಗಂತ ವರದಿ, ಬಳ್ಳಾರಿ:
ನಗರದ ಹೊಸಪೇಟೆ ರಸ್ತೆಯ ಗುರು ಫಂಕ್ಷನ್ ಹಾಲ್ ನಲ್ಲಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಶ್ರಯದಲ್ಲಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿತ್ತು. ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಸಭೆಗೆ ಚಾಲನೆ ನೀಡಿ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದ ಸರ್ಕಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಇಲ್ಲಿವರೆಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಭಾಜಪ ಸರ್ಕಾರ ವಿಶೇಷವಾಗಿ ಮುಸ್ಲಿಂ ಸಮದಾಯದವರಿಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದೆ. ಸ್ಚಾತಂತ್ರ್ಯ ಬಮದಾಗಿನಿದಲೂ ಹೆಚ್ಚು ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಸರ್ಕಾರ ಮುಸ್ಲೀಂ ಸಮುದಾಯದವರನ್ನು ಕೇವಲ ಮತಕ್ಕಾಗಿ ಬಳಸಿಕೊಂಡಿವೆ ಹೊರತು ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿಲ್ಲ, ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಿಲ್ಲ, ಕೆಲವೇ ವರ್ಷಗಳಲ್ಲಿ ನಮ್ಮ ಸರ್ಕರಗಳು ಹಿಂದುಳಿದ ವರ್ಗಗಳ ಎಲ್ಲ ಸಮುದಾಯದವರಿಗೆ ಅನೇಕ ಕೊಡುಗೆಗಳನ್ನು ನೀಡುವ ಮೂಲಕ ಇತರರಿಗೆ ಮಾದರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್, ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಮುಜಮಿಲ್ ಬಾಬು, ಉಪಾಧ್ಯಕ್ಷ ನೂರ್ ಬಾಷಾ, ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಮುಕ್ತರ್ ಪಠಾಣಸಾಬ್, ಅಲ್ಪಸಂಖ್ಯಾತ ಮೋರ್ಚಾದ ಕಾರ್ಯದರ್ಶಿ ಸೈಯದ್ ಸಲಾಂ, ಡಾ.ಅನಿಲ್ ಥಾಮಸ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಇಬ್ರಾಹಿಂ ಬಾಬು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ಮೋತ್ಕರ್, ಅನಿಲ್ ನಾಯ್ಡು ಸೇರಿದಂತೆ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾದ ರಫೀಕ್, ಸಿರಾಜುದ್ದೀನ್ ಹಾಗೂ ಹಜ್ ಕಮಿಟಿ ಸದಸ್ಯರಾದ ಮೊಹಿದ್ದೀನ್ ಅಲ್ಪಸಂಖ್ಯಾತರ ಮೋರ್ಚಾದ ಕಚೇರಿ ಕಾರ್ಯದರ್ಶಿ ರಿಹಾನ್ ಸಾಬ್ ಹಾಗೂ ಫಾರೂಕ್ ಸೇರಿದಂತೆ ಎಲ್ಲ ಮೋರ್ಚಾದ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.