Wednesday, August 17, 2022

Latest Posts

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಸಚಿವ ಕೋಟ ಪೂಜಾರಿಗೆ ಸ್ವಾಗತ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಚಾಮರಾಜನಗರ:

ಜಿಲ್ಲೆಗೆ ಆಗಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಗರದ ಟೋಲ್‍ಗೇಟ್‍ಯ ಬಳಿಯ ದೊಡ್ಡರಾಯಪೇಟೆ ಕ್ರಾಸ್‍ನಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಎಂ. ನಟರಾಜೇಗೌಡ, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷ ಎಂ. ರಾಮಚಂದ್ರ ಪೇಟಾ ತೊಡಗಿಸಿ, ಶಾಲು ಹಾಕಿ ಅಭಿನಂದಿಸಿ ಸ್ವಾಗತಿಸಿದರು.
ನಗರಕ್ಕೆ ಆಗಮಿಸುತ್ತಿದ್ದಂತೆ ಜಿಲ್ಲೆಯ ಮುಖಂಡರು ಹಾಗು ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳನ್ನು ಸ್ವಾಗತಿಸಿ, ಅಲ್ಲಿಂದ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದರು. ವಿಶೇಷ ಪೂಜೆ ಸಲ್ಲಿಸಿ, ಜಿಲ್ಲಾಡಳಿತ ಭವನಕ್ಕೆ ಸಚಿವರು ತೆಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯುರಪ್ಪ ಅವರು ವಿಶೇಷ ಅಸಕ್ತಿಯನ್ನು ವಹಿಸಿದ್ದಾರೆ. ಕೇಂದ್ರ ಸಂಪುಟ ವಿಸ್ತರಣೆಯಲ್ಲಿ ಪ್ರಧಾನಿ ಮೋದಿ ಅವರು ಹಿಂದುಳಿದ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವ ಮೂಲಕ ದೇಶದಲ್ಲಿರುವ ಹಿಂದುಳಿದ ವರ್ಗಗಳ ಅಭಿವೃದ್ದಿಯ ಪರ್ವವನ್ನು ಆರಂಭಿಸಿದ್ದಾರೆ ಎಂದರು.
ರಾಜ್ಯದಲ್ಲಿಯು ಸಹ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲಾಕ್‍ಡೌನ್ ಸಂದರ್ಭದಲ್ಲಿ ಈ ವರ್ಗಗಳಿಗೆ ವಿಶೇಷ ಆದ್ಯತೆ ನೀಡಿ, ಪ್ಯಾಕೇಜ್ ಘೋಷಣೆ ಮಾಡಿದ್ದರು. ಒಟ್ಟಾರೆ ಬಿಜೆಪಿ ಸರ್ಕಾರ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ದಿಯಲ್ಲಿ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ಮೂಲಕ ಪಕ್ಷ ಸಂಘಟನೆ ಮತ್ತು ಸರ್ಕಾರದಲ್ಲಿ ಈ ವರ್ಗಗಳಿಗೆ ಹೆಚ್ಚಿನ ಅದ್ಯತೆಗಳು ದೊರೆತಿದೆ ಎಂದರು.
ಓಬಿಸಿ ಜಿಲ್ಲಾಧ್ಯಕ್ಷ ನಟರಾಜೇಗೌಡ ಮಾತನಾಡಿ, ಜಿಲ್ಲೆಗೆ ಆಗಮಿಸಿರುವ ಸಚಿವರಾದ ಕೋಟಾ ಶ್ರೀನಿವಾಸಪೂಜಾರಿ ಅವರಿಗೆ ಪಕ್ಷದ ಹಿಂದುಳಿದ ಮೋರ್ಚಾದಿಂದ ಅದ್ದೂರಿ ಸ್ವಾಗತ ಕೋರಲಾಗಿದೆ. ಸರಳ ಸಜ್ಜನಿಕೆಯ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಧ ಪೂಜಾರಿ ಅವರು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷ ಎಂ. ರಾಮಚಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಸುಂದರ್, ಶಾಸಕ ಎನ್. ಮಹೇಶ್, ಚುಡಾ ಅಧ್ಯಕ್ಷ ಶಾಂತಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್, ನಗರ ಘಟಕದ ಅಧ್ಯಕ್ಷ ಎಸ್. ನಂದೀಶ್ ವಿಶ್ವಕರ್ಮ, ಕಾರ್ಯದರ್ಶಿಗಳಾದ ವಿನಯ್, ಪುರುಷೊತ್ತಮ್, ಗ್ರಾಮಾಂತರ ಘಟಕದ ಅಧ್ಯಕ್ಷ ಬೇಡರಪುರ ಬಸವಣ್ಣ, ಧಾರ್ಮಿಕ್ ಪರಿಷತ್‍ನ ಸದಸ್ಯರಾದ ವೇಧಮೂರ್ತಿ, ಚಿಕ್ಕರಾಜು, ಮುಖಂಡರಾದ ನಟರಾಜು, ವೇಣುಗೋಪಾಲ್, ಚಂದ್ರಶೇಖರ್ ರಾವ್ ಮೊದಲಾದವರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!