ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ದಿಲ್ಲಿ ತೆರಳಬೇಕಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಿಲ್ಲಿ ಪ್ರವಾಸ ಮುಂದೂಡಲ್ಪಟ್ಟಿದೆ. ಫೆ. 7ರಂದು ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಿಲ್ಲಿಯಲ್ಲಿ ರಾಜ್ಯದ ಸಂಸದರು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಬೇಕಾಗಿದೆ. ಹೀಗಾಗಿ ಸೋಮವಾರ ಹೊಸದಿಲ್ಲಿಗೆ ತೆರಳುತ್ತಿರುವುದಾಗಿ ಸಿಎಂ ತಿಳಿಸಿದರು.