ಗರ್ಭಧಾರಣ ಪೂರ್ವ, ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಕಾರ್ಯಾಗಾರ

ಹೊಸ ದಿಗಂತ ವರದಿ, ಚಿತ್ರದುರ್ಗ:

ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಸಭಾಂಗಣದಲ್ಲಿ ಈಚೆಗೆ ಜಿಲ್ಲಾಮಟ್ಟದ ಗರ್ಭಧಾರಣ ಪೂರ್ವ ಪ್ರಸವ ಪೂರ್ವ ಲಿಂಗಪತ್ತೆ ನಿಷೇಧ ಕಾಯ್ದೆ ಕುರಿತು ಕಾರ್ಯಾಗಾರ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಗರ್ಭಧಾರಣ ಪೂರ್ವ ಪ್ರಸವ ಪೂರ್ವ ಲಿಂಗಪತ್ತೆ ನಿಷೇಧ ಕಾಯ್ದೆ ಕುರಿತು ಸಲಹಾ ಸಮಿತಿ ಅಧ್ಯಕ್ಷರಾದ ಡಾ.ಸೌಮ್ಯ, ಸದಸ್ಯರಾದ ಡಾ.ಸತ್ಯನಾರಾಯಣ, ವಕೀಲ ಉಮೇಶ, ಗಾಯತ್ರಿ ಶಿವರಾಮ್ ಹಾಗೂ ಹೆರಿಗೆ ಮತ್ತು ಪ್ರಸೂತಿ ತಜ್ಞೆ ಡಾ.ತೋಯಜಾಕ್ಷಿ ಬಾಯಿ ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ ಸೇರಿದಂತೆ ೧೦೦ ಜನ ವೈದ್ಯರುಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಆರೋಗ್ಯ ಇಲಾಖೆಯ ಲಕ್ಷ್ಮಿನಾರಾಯಣರೆಡ್ಡಿ ಕಾರ್ಯಕ್ರಮ ನಿರೂಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!