ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದ ಕಾರು!

ಹೊಸ ದಿಗಂತ ವರದಿ, ವಿಜಯಪುರ:

ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ನಗರದ ಬಬಲೇಶ್ವರ ರಸ್ತೆಯಲ್ಲಿ ನಡೆದಿದೆ.

ಈ ಅವಘಡದಿಂದ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ರಸ್ತೆ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ ಪರಿಶೀಲಿಸಿದರು. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!