ಕರ್ನಾಟಕದ ಲೋಕಾಯುಕ್ತರಾಗಿ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್​. ಪಾಟೀಲ್ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದ ಲೋಕಾಯುಕ್ತರಾಗಿ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ನಂತರ ತೆರವಾಗಿರುವ ಸ್ಥಾನಕ್ಕೆ ನ್ಯಾಯಮೂರ್ತಿ ಬಿ.ಎಸ್​.ಪಾಟೀಲ್​ ಅವರನ್ನು ನೇಮಕ ಮಾಡಲಾಗಿದೆ.
ನ್ಯಾ.ಬಿ.ಎಸ್‌.ಪಾಟೀಲ್‌ 14 ವರ್ಷಗಳ ಕಾಲ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮುನ್ನ ಅವರು 20 ವರ್ಷಗಳ ಕಾಲ ವಕೀಲರಾಗಿದ್ದರು. 2019ರ ನವೆಂಬರ್​ನಲ್ಲಿ ಇವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!