ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಾಲಾ-ಕಾಲೇಜಿನ ಶುಲ್ಕ ಪಾವತಿಸಲು ಮಕ್ಕಳ ಪೋಷಕರಿಗೆ ಒತ್ತಡ ಹೇರಿದರೆ ಕ್ರಮ: ಡಿಸಿ ಖಡಕ್ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ -ಕಾಲೇಜಿನ ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿಯಿಂದ ಮಕ್ಕಳ ಪೋಷಕರಿಗೆ ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು ಬಂದಿವೆ. ಶಾಲೆಗೆ ಸಂಬಂಧಿಸಿ ಯಾವುದೇ ವಿಷಯದಲ್ಲಿ ಮಕ್ಕಳ ಪೋಷಕರಿಗೆ ಒತ್ತಡ ಹೇರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಖಾಸಗಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳ ಪೋಷಕರಿಗೆ ದೂರವಾಣಿ ಕರೆ ಮಾಡಿ ಬಾಕಿ ಇರುವ ಶಾಲಾ ಶುಲ್ಕವನ್ನು ಒಂದೇ ಕಂತಿನಲ್ಲಿ ಪಾವತಿಸಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ತಡೆಹಿಡಿಯಲಾಗುವುದು, ಪೋಷಕರು ವರ್ಗಾವಣೆ ಪತ್ರಕ್ಕೆ ಮನವಿ ಸಲ್ಲಿಸಿದಾಗ ನೀಡದೇ ಇರುವುದು, ಶಾಲೆಗಳಿಗೆ ಪೋಷಕರನ್ನು ಕರೆಸಿ ಲೇಖನ ಸಾಮಗ್ರಿಯನ್ನು ಶಾಲೆಯವರು ನಿಗದಿಪಡಿಸಿದ ಅಂಗಡಿಯಲ್ಲೇ ಖರಿದಿಸುವಂತೆ ಒತ್ತಾಯ ಮಾಡುತ್ತಿರುವ ಬಗ್ಗೆ ಹಲವು ಮಂದಿ ಪೋಷಕರು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ.
ರಾಜ್ಯಾದ್ಯಂತ ಶಾಲಾ ಕಾಲೇಜು ತೆರೆಯುವಂತಿಲ್ಲ ಎಂದು ಶಿಕ್ಷಣ ಇಲಾಖೆ ಆದೇಶ ನೀಡಿದ್ದರೂ, ಖಾಸಗಿ ಶಾಲಾ ಕಾಲೇಜಿನವರು ಶಾಲೆಗೆ ಬರಲು ತಿಳಿಸುತ್ತಿದ್ದಾರೆ ಎಂದು ಮಕ್ಕಳ ಪೋಷಕರು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದಾರೆ. ಕೊರೋನಾ ಸಂಕಷ್ಟದಲ್ಲಿ ಮಕ್ಕಳ ಪೋಷಕರು ಕೆಲಸವಿಲ್ಲದೆ ಕಷ್ಟಪಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಎಲ್ಲ ಖಾಸಗಿ ಶಾಲಾ ಕಾಲೇಜುಗಳ ಮುಖ್ಯಸ್ಥರು, ಆಡಳಿತ ಮಂಡಳಿಯವರು ಯಾವುದೇ ರೀತಿಯಲ್ಲಿ ಮಕ್ಕಳ ಪೋಷಕರಿಗೆ ಒತ್ತಾಡ ಹೇರಬಾರದು. ಇನ್ನು ಮುಂದೆ ಇಂತಹ ದೂರು ಬಂದಲ್ಲಿ ಸಂಬಂಧಪಟ್ಟ ಶಿಕ್ಷಣ ಸಂಸ್ಥೆ ವಿರುದ್ಧ ಶಿಕ್ಷಣ ಕಾಯ್ದೆ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಈ ಬಗ್ಗೆ ಯಾವುದೇ ದೂರು ಇದ್ದಲ್ಲಿ ಪೋಷಕರು ಸ್ವ ವಿಳಾಸದೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು (ddpi.edu.karmng@nic.in ), ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ (ddss.puc@gmail.com )ಗೆ ಲಿಖಿತ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss