ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶ್ರೀರಾಮಲಿಂಗೇಶ್ವರ ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕೃಷ್ಣರಾಜಪೇಟೆ:

ತಾಲೂಕಿನ ಬೂಕನಕೆರೆ ಹೋಬಳಿ ಮೋದೂರು ಗ್ರಾಮದ ಹೊರ ವಲಯದಲ್ಲಿರುವ ಪೌರಾಣಿಕ ಮಹತ್ವವನ್ನು ಪಡೆದಿರುವ ಶ್ರೀರಾಮಲಿಂಗೇಶ್ವರ ದೇವಾಲಯದ ಬಾಗಿಲನ್ನು ಒಡೆದಿರುವ ದುಷ್ಕರ್ಮಿಗಳು ಪ್ರತ್ಯೇಕವಾಗಿ ಇರಿಸಲಾಗಿದ್ದ ಹುಂಡಿಯನ್ನು ಒಡೆದು ಹುಂಡಿಯಲ್ಲಿ ಸಂಗ್ರಹವಾಗಿದ್ದ ನಗದು, ಅಮ್ಮನವರಿಗೆ ಧರಿಸಿದ್ದ 1 ಚಿನ್ನದ ತಾಳಿಯನ್ನು ದೋಚಿ ಪರಾರಿಯಾಗಿದ್ದಾರೆ.
ಕೋವಿಡ್‌ನ ಕಾರಣದಿಂದಾಗಿ ತಾಲೂಕಿನಾದ್ಯಂತ ಲಾಕ್‌ಡೌನ್ ಘೋಸಿದ್ದರಿಂದ ಭಕ್ತಾದಿಗಳಿಗೆ ಪೂಜೆ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತಿಲ್ಲ. ಆದ್ದರಿಂದ ಈ ಅವಕಾಶವನ್ನು ಉಪಯೋಗಿಸಿಕೊಂಡ ಕಳ್ಳರು ಈ ದುಷ್ಕೃತ್ಯವನ್ನು ಎಸಗಿದ್ದಾರೆ. ಎಂದಿನಂತೆ ದೇವರಿಗೆ ಪೂಜೆಯನ್ನು ಸಲ್ಲಿಸಲು ಅರ್ಚಕ ಪ್ರಕಾಶ್‌ಆರಾಧ್ಯ ಅವರು ಇಂದು ಬೆಳಿಗ್ಗೆ ದೇವಾಲಯದ ಬಳಿ ಬಂದಾಗ ಹುಂಡಿಯನ್ನು ದೇವಾಲಯದ ಆಚೆ ಬಿಸಾಡಿರುವುದನ್ನು ಕಂಡು ಗಾಬರಿಗೊಂಡು ಪುನಃ ಗ್ರಾಮಕ್ಕೆ ವಾಪಸ್ ಬಂದು ಗ್ರಾಮಸ್ಥರಿಗೆ ವಿಷಯವನ್ನು ಮುಟ್ಟಿಸಿದ್ದಾರೆ.
ತಕ್ಷಣವೇ ರಾಮಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಟೇಲ್ ಚಂದ್ರಪ್ಪ, ಗ್ರಾ.ಪಂ. ಸದಸ್ಯರಾದ ಎಂ.ಆರ್.ರಮೇಶ್, ನಾಗರಾಜು ಮತ್ತು ಮಂಜು ಅವರುಗಳು ಗ್ರಾಮಸ್ಥರೊಡನೆ ದೇವಾಲಯಕ್ಕೆ ಬಂದು ಪೊಲೀಸರಿಗೆ ವಿಷಯವನ್ನು ಮುಟ್ಟಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಠಾಣೆ ಪೋಲಿಸ್ ಇನ್ಸ್‌ಪೆಕ್ಟರ್ ಕೆ.ಎಸ್.ನಿರಂಜನ, ಸಬ್‌ಇನ್ಸ್‌ಪೆಕ್ಟರ್‌ಗಳಾದ ಸಿ.ಎಸ್.ಸುರೇಶ್, ಎಂ.ಪ್ರಮೋದ್ ಸ್ಥಳಕ್ಕೆ ಆಗಮಿಸಿ ದೇವಾಲಯದ ಸುತ್ತಲೂ ಪರಿಶೀಲನೆ ನಡೆಸಿ ಗ್ರಾಮಸ್ಥರಿಂದ ದೂರನ್ನು ಸ್ವೀಕರಿಸಿ ತನಿಖೆಯನ್ನು ಆರಂಭಿಸಿ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss