ರಾಜ್ಯದ ಶ್ರಮಿಕರ ಸಂಕ್ಷೇಮಕ್ಕೆ 100 ಸಂಚಾರಿ ಕ್ಲಿನಿಕ್ ರಾಜ್ಯ ಸಚಿವ ಸಂಪುಟ ಅನುಮೋದನೆ

ಹೊಸ ದಿಗಂತ ವರದಿ, ಬೆಳಗಾವಿ:

ರಾಜ್ಯದ ಶ್ರಮಿಕ ವರ್ಗದ ಆರೋಗ್ಯ ಸುಧಾರಣೆಗಾಗಿ ಕಾರ್ಮಿಕ ಇಲಾಖೆ ಈಗಾಗಲೇ ಜಾರಿ ಮಾಡಿರುವ ಸಂಚಾರಿ ಕ್ಲಿನಿಕ್ ಯೋಜನೆಯಡಿ 100 ಹೈಟೆಕ್ ಸಂಚಾರಿ ಕ್ಲಿನಿಕ್‍ಗಳ ಸೇರ್ಪಡೆಗೆ ಗುರುವಾರ ಇಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಪ್ರಸ್ತುತ ರಾಜ್ಯದಲ್ಲಿ 35.40 ಲಕ್ಷ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡಿಕೊಂಡಿದ್ದು, ಶ್ರಮಿಕರು ತಮ್ಮ ಕೆಲಸದ ಒತ್ತಡ ಮತ್ತು ಸಮಯಾಭಾವದಿಂದ ಹಾಗೂ ಶ್ರಮಿಕ ವರ್ಗದ ಕುಟುಂಬದವರು ಆರ್ಥಿಕ ಹೊರೆ ಕಾರಣಗಳಿಂದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದ್ದಾರೆ, ಹೀಗಾಗಿ ಶ್ರಮಿಕರ ಮತ್ತು ಅವರ ಕುಟುಂಬ ವರ್ಗದವರಿಗೆ ಹೈಟೆಕ್ ಆರೋಗ್ಯ ಸೇವೆಗಳು ಅವರಿದ್ದೇಡೆಗೆ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೈಟೆಕ್ ಸಂಚಾರಿ ಕ್ಲಿನಿಕ್ ಸೇವೆ ಆರಂಭಿಸಿದ್ದು, ಈ ಸೇವೆಯನ್ನು ಇನ್ನಷ್ಟು ಶ್ರಮಿಕರಿಗೆ ತಲುಪಿಸುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇನ್ನೂ 100 ಹೈಟೆಕ್ ಸಂಚಾರಿ ಕ್ಲಿನಿಕ್‍ಗಳ ಸೇರ್ಪಡೆಗೆ ಸಮ್ಮತಿ ದೊರಕಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!