ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ.
ಚಳಿಗಾಲದ ಅಧಿವೇಶನದ ವೇಳಾಪಟ್ಟಿಯನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪ್ರಕಟಿಸಿದ್ದು, ನವೆಂಬರ್ 26ರಂದು ಸಂವಿಧಾನ್ ಸದನದ ಸೆಂಟ್ರಲ್ ಹಾಲ್ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದು ಹೇಳಿದರು.
ಅಂದ್ಹಾಗೆ, ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭಾ ಚುನಾವಣೆಯ ನಂತರ ಇದು ಮೊದಲ ಚಳಿಗಾಲದ ಅಧಿವೇಶನವಾಗಿದೆ.