ದ್ವಿಚಕ್ರ ವಾಹನಗಳ ಡಿಕ್ಕಿ: ಬೈಕ್ ಸವಾರ ಸಾವು

ಹೊಸ ದಿಗಂತ ವರದಿ, ಕಲಬುರಗಿ:

ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಬೈಕ್ ಸವಾರನೊರ್ವ ಮೃತಪಟ್ಟ ಘಟನೆ ಗುರುವಾರ ನಗರದ ಗಂಜ್ ಪ್ರದೇಶದ ನಗರೇಶ್ವರ ಶಾಲೆ ಮುಂಭಾಗ ನಡೆದಿದೆ.

ಅಬ್ದುಲ್ ಗಫರ್ (55) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಪುತ್ರನ ಜೊತೆ ಬೈಕ್ ಮೇಲೆ ತೆರಳುತ್ತಿದ್ದ ಅಬ್ದುಲ್ ಗಫರ್, ವೇಗವಾಗಿ ಬಂದು ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ,
ಬೈಕ್ ಸ್ಕಿಡ್ ಆಗಿ ಬಿದ್ದು, ಅಬ್ದುಲ್ ಗಫರ್ ತಲೆ ರಸ್ತೆ ಡಿವೈಡೈಡ್‌ಗೆ ಬಡಿದಿದೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮತ್ತೊರ್ವನಿಗೆ ಗಾಯವಾಗಿದೆ.

ಅಪಘಾತದ ಭೀಕರತೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬಾಲಕ ನೊಬ್ಬ ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿ ಎದುರಿಗೆ ಬಂದಿದೆ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ. ಘಟನೆ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!