ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗಳ ಪ್ರೇಮ ವಿವಾಹಕ್ಕೆ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರಿನ ಉದ್ಯಾನವನದಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ಅಂಜನಾ ನಗರದ ಲಕ್ಷ್ಮಮ್ಮ (45) ಎಂಬ ಮಹಿಳೆ ನೇಣು ಹಾಕಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮಗಳು ಪ್ರೇಮ ವಿವಾಹಕ್ಕಾಗಿ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದ ಲಕ್ಷ್ಮಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.