ಹೊಸದಿಗಂತ ಡಿಜಿಟಲ್ ಡೆಸ್ಕ್
ಟಾಲಿವುಡ್ ಹಿರಿಯ ನಟ ನರೇಶ್ ಮತ್ತು ತನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಆಕ್ಷೇಪಾರ್ಹ ಕಾಮೆಂಟ್ ಗಳ ವಿರುದ್ಧ ನಟಿ ಪವಿತ್ರಾ ಲೋಕೇಶ್ ದೂರು ದಾಖಲಿಸಿದ್ದಾರೆ.
ಸೈಬರ್ ಕ್ರೈಂ ಪೊಲೀಸರನ್ನ ಸಂಪರ್ಕಿಸಿದ ನಟಿ ಪವಿತ್ರಾ ಲೋಕೇಶ್, ಫೋಟೋಗಳನ್ನು ಮಾರ್ಫ್ ಮಾಡಿ ವೈರಲ್ ಮಾಡಲಾಗುತ್ತಿದ್ದು, ಹಲವು ವೆಬ್ ಸೈಟ್ ಮತ್ತು ಯೂಟ್ಯೂಬ್ ಚಾನೆಲ್ ಗಳಳ ವಿರುದ್ಧವೂ ದೂರು ನೀಡಿದ್ದಾರೆ.
ಕೆಲ ದಿನಗಳಿಂದ ಇವರಿಬ್ಬರ ಅಫೇರ್ ಇಂಡಸ್ಟ್ರಿಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಆ ವೇಳೆ ಇಬ್ಬರೂ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ದೊಡ್ಡ ಸಂಚಲನ ಮೂಡಿಸಿತ್ತು.
ಬಳಿಕ ನರೇಶ್ ಅವರ ಮಾಜಿ ಪತ್ನಿ ರಮ್ಯಾ ರಘುಪತಿ ಅವರು ಮೈಸೂರಿನ ಹೋಟೆಲ್ನಲ್ಲಿ ಒಟ್ಟಿಗೆ ಇದ್ದಾಗ ಅವರನ್ನ ಹಿಡಿದಿರುವ ವಿಡಿಯೋ ಕೂಡ ವೈರಲ್ ಆಗಿತ್ತು. ಇದಾದ ಬಳಿಕ ಸೈಲೆಂಟ್ ಆಗಿದ್ದ ಇವರು ಆ ಕೃಷ್ಣ ಅವರ ಅಂತ್ಯಕ್ರಿಯೆಯಲ್ಲಿ ಜೊತೆಗೆ ಕಾಣಿಸಿಕೊಂಡಿದ್ದರು.
ಅಲ್ಲಿ ಅವರ ನಡಿವಳಿಕ ವಿರುದ್ಧ ಹಲವರು ಕಾಮೆಂಟ್ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇನ್ನು ಕೆಲವು ಯೂಟ್ಯೂಬ್ ಚಾನೆಲ್’ಗಳು ಹಾಗೂ ಹಲವು ವೆಬ್ ಸೈಟ್’ಗಳು ಅಶ್ಲೀಲ ಪೋಸ್ಟ್’ಗಳನ್ನ ಹಾಕಿದ್ದಾರೆ ಎಂದು ಪವಿತ್ರಾ ಲೋಕೇಶ್ ಕೆರಳಿದ್ದು, ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.