ಫೇಸ್‌ಬುಕ್‌ನಲ್ಲಿ ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌: ವ್ಯಕ್ತಿ ವಿರುದ್ದ ಎಫ್‌ಐಆರ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಫೇಸ್‌ಬುಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ ಅನ್ನು ಹಾಕಿದ್ದ ವ್ಯಕ್ತಿ ವಿರುದ್ದ ಉತ್ತರ ಪ್ರದೇಶದ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ಅಂಜರ್‌ ಅಹ್ಮದ್‌ ಎಂಬಾತನ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಕಡಧಾಮ್ ಪೊಲೀಸ್ ಠಾಣಾಧಿಕಾರಿ ಅಶುತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಸಿಂಗ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!