ಕಾಂಗ್ರೆಸ್ ಶಾಸಕರಿಗೆ HDK ಯಿಂದ ಆಫರ್: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಫರ್ ನೀಡುತ್ತಿದ್ದಾರೆ.ಜೊತೆಗೆ ಧರ್ಮಿ ಕೂಡ ಹಾಕಿದ್ದಾರೆ ಎಂದು ಡಿಸಿಎಂ ಆರೋಪ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮ್ಕಿ ಹಾಕುತ್ತಿರುವ ಬಗ್ಗೆ ಮಾಹಿತಿ ಇದೆ.ಶಾಸಕರೇ ಈ ಬಗ್ಗೆ ಹೇಳುತ್ತಿದ್ದಾರೆ ಎಂದರು.

ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ ಎಂದು ಟಾಂಗ್ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!