Sunday, October 1, 2023

Latest Posts

ಬೀದರ್ ನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ: ಅಧಿಕಾರಿ ಸಸ್ಪೆಂಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೀದರ್ ನಲ್ಲಿ ಕಲುಷಿತ ನೀರು ಕುಡಿದು 21 ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಾ.ಪಂ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಬೀದರ್ ತಾ.ಪಂ ಇಒ ಮಾಣಿಕ್ ರಾವ್ ರನ್ನು ಕರ್ತವ್ಯಲೋಪವೆಸಗಿದ ಆರೋಪದ ಮೇಲೆ ಸಸ್ಪೆಂಡ್‌ ಮಾಡಲಾಗಿದೆ.

ಏನಿದು ಪ್ರಕರಣ:

ಬೀದರ್ ತಾಲ್ಲೂಕಿನ ಬರೀದಾಬಾದ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿದ್ದರು. ನೀರು ಪೂರೈಕೆ ಕೊಳವೆಮಾರ್ಗದಲ್ಲಿ ಸೋರಿಕೆ ಆಗಿರುವುದೇ ಈ ಅಹಿತಕರ ಘಟನೆಗೆ ಕಾರಣ ಎಂದು ಹೇಳಲಾಗಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ತಾ.ಪಂ ಇಒ ಮಾಣಿಕ್ ರಾವ್ ರನ್ನು ಕರ್ತವ್ಯಲೋಪದಡಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!