ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಧಿಕಾರಿಗಳು ಜನರ ಕೆಲಸ ಮಾಡುವುದನ್ನು ಬಿಟ್ಟು ಬಡ್ಡಿ ವ್ಯವಹಾರ ಮಾಡುತ್ತಾರೆ: ಸಚಿವ ಬಿ.ಸಿ.ಪಾಟೀಲ್

ದಿಗಂತ ವರದಿ ಕೊಪ್ಪಳ

ಜಿಲ್ಲಾಮಟ್ಟದ ಅಧಿಕಾರಿಗಳು ವಾರದಲ್ಲಿ ಎರಡು ದಿನಗಳು ಮಾತ್ರ ಕಚೇರಿಯಲ್ಲಿ ಇರುತ್ತಾರೆ . ಇನ್ನುಳಿದ ದಿನ ಊರಿಗೆ ಹೋಗಿ ಬಡ್ಡಿ ವ್ಯವಹಾರ ಮಾಡ್ತಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಗರಂ ಆದರು .
ಕೊಪ್ಪಳದ ಕಿಮ್ಸ್‌ನಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿದ ಅವರು , ಜಿಲ್ಲಾಮಟ್ಟದ ಅಧಿಕಾರಿಗಳ ಬೇಜವಾಬ್ದಾರಿತನದ ಉತ್ತರದಿಂದ ಕೆಂಡಾಮಂಡಲರಾಗಿ ಆಕ್ರೋಶ ವ್ಯಕ್ತಪಡಿಸಿದರು .
ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಇರುವುದೇ ಇಲ್ಲ . ಇನ್ನು ಮುಂದೆ ಅವರಿಗೂ ಬಯೋಮೆಟ್ರಿಕ್ ವ್ಯವಸ್ಥೆ ಮಾಡಬೇಕು . ಅಂದಾಗ ಮಾತ್ರ ಜಿಲ್ಲಾಮಟ್ಟದ ಅಧಿಕಾರಿಗಳು ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಾದರೂ ಕಚೇರಿಯಲ್ಲಿ ಇರುತ್ತಾರೆ ಎಂದು ಸಚಿವರು ಸಲಹೆ ನೀಡಿದರು .
ಅಂಬೇಡ್ಕರ್ ನಿಗಮದ ಅಧಿಕಾರಿ ಕಳೆದ ಕೆಡಿಪಿ ಸಭೆಯಲ್ಲಿ ಕಾಮಗಾರಿಯೊಂದರ ಕುರಿತು ಇಂದಿನ ಸಭೆಯಲ್ಲೂ ಮಾಹಿತಿ ನೀಡುವಲ್ಲಿ ತಡಬಡಾಯಿಸಿದ್ದರಿಂದ ಸಚಿವರು ಜಿಪಂ ಸಿಇಓ ಅವರನ್ನು ತರಾಟೆಗೆ ತೆಗೆದುಕೊಂಡರು . ಜಿಪಂ ಸಿಇಓ ಅವರು ಅಂಬೇಡ್ಕರ್ ನಿಗಮದ ಅಧಿಕಾರಿಗೆ ಡೆಡ್‌ಲೈನ್ ನೀಡಿದರೂ ಉದಾಸೀನ ಮಾಡಿರುವುದಾಗಿ ದೂರಿದರು . ಹಾಗಾಗಿ ಅಂಬೇಡ್ಕರ್ ನಿಗಮದ ಅಧಿಕಾರಿಯನ್ನು ಅಮಾನತುಗೊಳಿಸುವ , ಅಧಿಕಾರಿಯ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಯೋಚಿಸಿ ಎಂದು ಸಚಿವ ಬಿ.ಸಿ.ಪಾಟೀಲರು ತಿಳಿಸಿದರು .
ಭೂ ಸೇನಾ ನಿಗಮದಡಿ ಯಲಬುರ್ಗಾ ಭಾಗದಲ್ಲಿ ಸುಮಾರು 63 ಕೋಟಿ ರೂಪಾಯಿ ಅವ್ಯವಹಾರದ ದೂರುಗಳಿವೆ . ಜೊತೆಗೆ ಭೂಸೇನೆಯ ಅಧಿಕಾರಿಗಳೇ ಅವ್ಯವಹಾರದ ತನಿಖೆ ನಡೆಸಿದಾಗ ಸುಮಾರು 7-8 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ವರದಿ ನೀಡಿದ್ದಾರೆ ಎಂದು ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ದೂರಿದರು .
ಇದಕ್ಕೆ ಉತ್ತರಿಸಿದ ಭೂಸೇನಾ ನಿಗಮದ ಕಾರ್ಯನಿರ್ವಾಹಕ ಅಭಿಯಂತರ ಚಿಂಚೋಳಿಕರ್ , ಅದು ಈ ಹಿಂದೆ ಇದ್ದ ಅಧಿಕಾರಿಗಳಿಂದ ಆಗಿದ್ದು , ಅದನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದರು .

ಭೂ ಸೇನಾ ನಿಗಮದವರು ಅನುದಾನ ಬಂದಾಗ ಮಾತ್ರ ಕಾಮಗಾರಿ ನಡೆಸುತ್ತಾರೆ . ಅನುದಾನ ಮುಗಿದ ಬಳಿಕ ಕಾಮಗಾರಿಯನ್ನು ಸ್ಥಗಿತಗೊಳಿಸುತ್ತಾರೆ . ಮತ್ತೇ ಅನುದಾನ ಬಂದ ಮೇಲೆ ಕಾಮಗಾರಿ ಶುರು ಮಾಡೋ ಪರಿಪಾಠ ರೂಢಿಸಿಕೊಂಡಿದ್ದಾರೆ . ಮೊದಲು ಇದನ್ನು ಕೈಬಿಡಿ . ಕಾಮಗಾರಿ ಪೂರ್ಣಗೊಳಿಸಿ ಆನಂತರ ಸರಕಾರದ ಅನುದಾನವನ್ನು ಕ್ಲೀನ್ ಮಾಡಿ ಎಂದು ಸಚಿವ ಬಿ.ಸಿ.ಪಾಟೀಲ ಹೇಳಿದರು .

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss