ಅಧಿಕಾರಿಗಳು ಕಾನೂನುಬಾಹಿರವಾಗಿ ನಡೆದುಕೊಂಡಿದ್ದಾರೆ: ಶಾಸಕ ಡಾ. ಎಚ್.ಕೆ.ಪಾಟೀಲ ಆರೋಪ

ಹೊಸದಿಗಂತ ವರದಿ,ಗದಗ:

ಕಾಂಗ್ರೆಸ್ ಪಕ್ಷದ ಕೆಲ ಪರಿಷತ್ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರು ಗದಗ ಮತದಾರ ಪಟ್ಟಿಗೆ ಸೇರಲು ಬಯಸಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕರಿಸುವ ಮೂಲಕ ಅಧಿಕಾರಿಗಳು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಎಂದು ಶಾಸಕ ಡಾ. ಎಚ್.ಕೆ.ಪಾಟೀಲ ಆರೋಪ ಮಾಡಿದರು.

ಸ್ಥಳೀಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಮೋಹನಕುಮಾರ್ ಕೊಂಡಜ್ಜಿ, ಪ್ರಕಾಶ್ ರಾಥೋಡ, ರಾಜ್ಯಸಭಾ ಸದಸ್ಯ ಡಾ. ಎಲ್ ಹನುಮಂತಯ್ಯ ಅವರು ಕಾನೂನಾತ್ಪಕವಾಗಿ ಅರ್ಹರಾಗಿದ್ದರೂ ಅವರ ಅರ್ಜಿ ತಿರಸ್ಕರಿಸಲಾಗಿದೆ. ಅಧಿಕಾರಿಗಳು ಕಾನೂನಾತ್ಮಕವಾಗಿ ನಡೆದುಕೊಂಡಿದ್ದರೆ ಈ ಪ್ರಶ್ನೆ ಬರುತ್ತಿರಲಿಲ್ಲ. ಬಿಜೆಪಿ ಪರಿಪಾಠ ಹಾಕಿಕೊಟ್ಟಿದ್ದಾರೆ. ಅವರು ಬೆಂಗಳೂರು, ಕಲಬುರಗಿ, ದಾವಣಗೆರೆಯಲ್ಲಿ ಇದನ್ನೆ ಮಾಡಿದ್ದಾರೆ. ಉಳಿದವರು ಮಾಡುತ್ತಿರುವುದನ್ನು ಗಮನಿಸುತ್ತಿದ್ದೇವೆ. ನಾವು ಸರ್ಟಿಫಿಕೆಟ್‌ಗಾಗಿ ಅರ್ಜಿ ಸಲ್ಲಿಸಿಲ್ಲ. ನಾಯಕರು ಮನೆ ಇಲ್ಲಿ ಮಾಡಿದ್ದರು. ಅಧಿಕಾರಿಗಳು ಯಾರೂ ಅರ್ಥ ಮಾಡಿಕೊಳ್ಳಲಿಲ್ಲ. ಸರ್ಕಾರದ ಒತ್ತಡದಿಂದಾಗಿ ನಾಯಕರುಗಳ ಹೆಸರು ಮತದಾರರ ಪಟ್ಟಿಯಲ್ಲಿ ಸೇರದೆ ಅನ್ಯಾಯವಾಗಿದೆ ಎಂದು ಶಾಸಕ ಡಾ. ಎಚ್.ಕೆ.ಪಾಟೀಲ ಅಸಮಾದಾನ ವ್ಯಕ್ತಪಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!